38.6 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ಸ್ಪರ್ಧೆಗಳು -2025ಭಾರತದ ಯುವಜನತೆ ವೈಜ್ಞಾನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡುವ ಶಕ್ತಿಯಾಗಬೇಕು- ಶ್ರೀಮತಿ ರಶ್ಮಿತಾ ಜೈನ್

ಮೂಡುಬಿದಿರೆ: ಭಾರತ ದೇಶಕ್ಕೆ ಜನಸಂಖ್ಯೆ ಸಂಪನ್ಮೂಲವಾಗಬೇಕು. ವಿಜ್ಞಾನವೆಂಬ ವಿಶೇಷ ಜ್ಞಾನವನ್ನು ಗಳಿಸಿ, ಅನ್ವೇಷಣಾ ಪ್ರವೃತ್ತಿಯನ್ನು ಮೈಗೂಡಿಸಿಕೊಂಡು ವೈಜ್ಞಾನಿಕ ಕ್ಷೇತ್ರದಲ್ಲಿ ಬಲು ದೊಡ್ಡ ಸಾಧನೆ ಗೈಯಲು ದೇಶದ ಯುವಜನತೆ ಶಕ್ತಿಯಾಗಿ ರೂಪುಗೊಳ್ಳಬೇಕೆಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅಭಿಪ್ರಾಯ ಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಕಲ್ಲಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಜರಗಿದ ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ಸ್ಪರ್ಧೆಗಳು -2025 ಇದರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಆಟಲ್, ಇನ್‌ಸ್ಪಾಯರ್, ಯುವಿಕ ದಂತಹ ವಿಜ್ಞಾನ ಕಾರ್ಯಕ್ರಮಗಳು ದೇಶಕ್ಕೆ ಯುವ ವಿಜ್ಞಾನಿಗಳನ್ನು ನೀಡುವಲ್ಲಿ ಬಹುದೊಡ್ಡ ಪಾತ್ರ ವಹಿಸಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮೂಡುಬಿದಿರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ವಿರೂಪಾಕ್ಷಪ್ಪ ಎಚ್ ಎಸ್ ಇವರು ಮಾತನಾಡಿ “ನಿತ್ಯ ಜೀವನದಲ್ಲಿ ವಿಜ್ಞಾನವು ಅವಿಭಾಜ್ಯ ಅಂಗವಾಗಿದೆ. ಬಾಲ್ಯದಿಂದಲೇ ಮಕ್ಕಳು ವಿಜ್ಞಾನ ವಿಷಯದಲ್ಲಿ ಆಸಕ್ತಿ ವಹಿಸಿಕೊಂಡು ಸಮಾಜಕ್ಕೆ ವಿಶೇಷ ಕೊಡುಗೆಯನ್ನು ನೀಡುವಂತಾಗಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಯಟ್ ಉಪನ್ಯಾಸಕ ಶ್ರೀನಿವಾಸ ಅಡಿಗ. ಮೂಡುಬಿದಿರೆ ತಾಲೂಕು ಶಿಕ್ಷಣ ಸಂಯೋಜಕಿ ಶ್ರೀಮತಿ ಸ್ಥಿತ ಮಿರಾಂಡ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್. ತೀರ್ಪುಗಾರರಾದ ಪಶುಪತಿ ಶಾಸ್ತ್ರಿ ಹಾಗೂ ಶ್ರೀ ದಿನೇಶ್ ಇವರು ಉಪಸ್ಥಿತರಿದ್ದರು.ಉದ್ಘಾಟನಾ ಅಂಗವಾಗಿ ಎಕ್ಸಲೆಂಟ್, ಆಟಲ್ ವಿಭಾಗದವರು ಸೆನ್ಸಾರ್ ತಂತ್ರಜ್ಞಾನವನ್ನು ಉಪಯೋಗಿಸಿ ಗೈದ ದೀಪ ಪ್ರಜ್ವಲನೆ ವಿಶೇಷವಾಗಿ ಎಲ್ಲರ ಗಮನ ಸೆಳೆಯಿತು.

ಉಪಸ್ಥಿತರಿದ್ದ ಅತಿಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿಯವರು ಸಸ್ಯ ಶ್ಯಾಮಲ ಯೋಜನೆಯ ಅಂಗವಾಗಿ ಸಸಿಗಳನ್ನಿತ್ತು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿಜ್ಞಾನ ಶಿಕ್ಷಕ ಶ್ರೀ ಪ್ರಜ್ವಲ್ ಶೆಟ್ಟಿ ನಿರೂಪಿಸಿ ಕಾರ್ಯಕ್ರಮದಲ್ಲಿ ಸಿ. ಆರ್. ಪಿ ಶ್ರೀಮತಿ ಮಹೇಶ್ವರಿ ಇವರು ವಂದಿಸಿದರು.

Related posts

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!