25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಉದ್ಘಾಟನೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ದೀಪ ಪ್ರಜ್ವಲನೆಗೊಳಿಸಿ ಉದ್ಘಾಟಿಸಿದ ಹರೀಶ್ ಆರಿಕೋಡಿ ಧರ್ಮದರ್ಶಿಗಳು ಶ್ರೀ ಚಾಮುಂಡಿ ಕ್ಷೇತ್ರ ಆರಿಕೋಡಿ ವಿದ್ಯಾರ್ಥಿಗಳಲ್ಲಿ ಮಾನಸಿಕ ದೃಢತೆಯನ್ನು ಕಾಪಾಡಿಕೊಳ್ಳಲು ಚೆಸ್ ಅತೀ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಇವರು ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ಮಾನಸಿಕ, ದೈಹಿಕ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಸಂಸ್ಥೆಯು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಒಳಿತು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಾಕೇಸರಿ ವಾಣಿ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದ ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡುತ್ತ, ಕ್ರೀಡಾಳುಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಗಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿಯಾದ ಶ್ರೀಮತಿ ಸುಜಯ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಆಡಳಿತಾಧಿಕಾರಿಯಾದ ಪ್ರಸಾದ್ ಕುಮಾ‌ರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಚಿಕಿತ್ಸಾ ಫಾರ್ಮ ಮಾಲಕರಾದ ಶ್ರೀಶ ಮುಚ್ಚಿನಾಯ, ಪಪ್ಪು ಸೌಂಡ್ಸ್ ಮತ್ತು ಲೈಟಿಂಗ್ಸ್ ಮಾಲಕರಾದ ಮಹಮ್ಮದ್ ಶಬೀರ್ ಮತ್ತು ಶ್ರೀ ಚಾಮುಂಡೇಶ್ವರಿ ಶಿಲ್ಪ ಕಲಾ ಕೇಂದ್ರ ಪಿಲಿಗೂಡು ಇದರ ಮಾಲಕರಾದ ಪದ್ಮನಾಭ, ತಾಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷರ ಜಯರಾಜ್ ಜೈನ್, ತಾಲೂಕು ಮತ್ತು ಜಿಲ್ಲೆಯ ದೈಹಿಕ ಶಿಕ್ಷಕ ಸಂಘಟನೆ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶ್ರೀಮತಿ ಸುಹಾಸಿನಿ ಎ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya
error: Content is protected !!