37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸ್ಥಿತಿ ಗಂಭೀರ

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

ಪ್ರಾಥಮಿಕ ಮಾಹಿತಿಯಂತೆ, KSRTC ಬಸ್ ಗ್ಯಾಸ್ ಸಿಲಿಂಡರ್ ಹೊತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಹಿಂಬದಿಯಿಂದ ಮತ್ತೊಂದು ಲಾರಿ ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ತೀವ್ರಗೊಂಡಿದೆ. ಇದರಲ್ಲಿ KSRTC ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಭಾರೀ ವಾಹನ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.ಘಟನೆಯ ಮಾಹಿತಿ ಪಡೆದ ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related posts

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!