ಬೆಳ್ತಂಗಡಿ: ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು. ಹಿಂದೂ ಸಮಾಜದಲ್ಲಿದ್ದ ಜಾತಿ ವ್ಯವಸ್ಥೆಯನ್ನು ಕಂಡು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಸಂದೇಶವನ್ನು ಜಗತ್ತಿಗೆ ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಸೆ.7 ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮಾ ಸಭಾಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಉಜಿರೆ ಎಸ್.ಡಿ.ಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ದಿವಾ ಕೊಕ್ಕಡ ಉಪನ್ಯಾಸ ನೀಡಿ ಅಶ್ಪರ್ಶತೆಯನ್ನು ಸಾತ್ವಿಕವಾಗಿ ವಿರೋದಿಸಿ,ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದ ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು.ಸಮಾಜದಲ್ಲಿ ಸಮಾನತೆ,ಶಾಂತಿ,ನೆಮ್ಮದಿ ಬರಬೇಕಾದರೆ ದೇವಸ್ಥಾನವಿರಬೇಕು.ವಿದ್ಯೆ ಮತ್ತು ಸಂಘಟನೆಯಿಂದ ಬದುಕಿನಲ್ಲಿ ಪರಿವರ್ತನೆಯನ್ನು ಕಂಡುಕೊಳ್ಳಲು ಸಾಧ್ಯವಿದೆ. ಇಂದು ಎಲ್ಲರಿಗೂ ವಿದ್ಯೆ ಸಿಗುತ್ತಿದೆ.ಆದರೆ ನಾವು ಎತ್ತ ಕಡೆ ಸಾಗುತ್ತಿದೆ ಎಂಬುವುದರ ಬಗ್ಗೆ ನಮಗೆ ಅರಿವಿಲ್ಲ.ನಾವೆಲ್ಲರೂ ನಾರಾಯಣ ಗುರುಗಳ ಜೀವನವನ್ನು ಅಧ್ಯಯನ ಮಾಡಬೇಕು ಎಂದರು.
ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಮಾತನಾಡಿ ಸಮಾಜಕ್ಕೆ ನೆರಳಾಗಿ,ಜೀವನ ಮೌಲ್ಯಗಳನ್ನು ಜಗತ್ತಿಗೆ ಸಾಮರಸ್ಯ,ಸಂಸ್ಕಾರದ ಮೂಲಕ ತಿಳಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.ಭಾರತೀಯ ಸನಾತನ ಪರಂಪರೆಯ ವೇದ,ಉಪನಿಷತ್ತು,ಭಗವದ್ಗೀತೆಗಳನ್ನು ವಿದ್ಯಾರ್ಥಿಗಳು ಅಧ್ಯಾಯನ ಮಾಡಿ ಜೀವನ ಮೌಲ್ಯಗಳನ್ನು ಹೊಂದಬೇಕು ಎಂದರು.
ವೇದಿಕೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್,ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಸಹಕಾರ ಅಭಿವೃದ್ಧಿ ಅಧಿಕಾರಿ ಬಿವಿ ಪ್ರತಿಮಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್, ವೇಣೂರು ಪ್ರೌಢ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ,ನಾರಾವಿ ಗ್ರಾ.ಪಂ ಸದಸ್ಯ ಸಂತೋಷ್ ಪೂಜಾರಿ ಮರ್ದೋಟ್ಟು ಹಾಗೂ ವಿದ್ಯಾರ್ಥಿಗಳು,ತಾಲೂಕು ಮಟ್ಟದ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು.ಲಾಯಿಲ ಕರ್ನೋಡಿ ಶಾಲಾ ಶಿಕ್ಷಕಿ ಮಮತಾ ನಿರೂಪಿಸಿದರು.











