September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ನಾರಾವಿ: “ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದದ್ದು. ವಿದ್ಯಾರ್ಥಿಗಳು ಮಾಡುವ ತಪ್ಪುಗಳನ್ನು ಎತ್ತಿ ತೋರಿಸದೆ ನಯವಾಗಿ ತಿದ್ದಿ ಅವರನ್ನು ಸರಿದಾರಿಗೆ ತರುವವನೇ ನಿಜವಾದ ಶಿಕ್ಷಕ. ಗುರು ಶಿಷ್ಯರ ಸಂಬಂಧ ಅಮರವಾದುದು “ಎಂದು ಸಂತ ಅಂತೋನಿ ಕಾಲೇಜಿನ ಪ್ರಾoಶುಪಾಲ ಸಂತೋಷ್ ಸಲ್ದಾನ ಹೇಳಿದರು.

ಅವರು ಸಂತ ಅಂತೋನಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು. ವೇದಿಕೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಕು. ಗ್ಲೆನಿಷಾ ಸ್ವಾಗತಿಸಿದರು. ಕು ಕಾವ್ಯ, ಡಾ. ಸರ್ವ ಪಳ್ಳಿ ರಾಧಾಕೃಷ್ಣನ್ ಅವರ ಜೀವನ ಸಾಧನೆಯನ್ನು ವಿವರಿಸಿದರು. ಕು ಶೈಲಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪದವಿ ಕಾಲೇಜು ವಿದ್ಯಾರ್ಥಿಗಳು ಎಲ್ಲಾ ಉಪನ್ಯಾಸಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ರಂಜಿಸಿದರು.

Related posts

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!