ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುಕ್ಕಾವು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಟ , ಮುಂಡಾಜೆ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕುಕ್ಕಾವು ಜನಜಾಗೃತಿ ಗ್ರಾಮ ಸಮಿತಿ ಕುಕ್ಕಾವು ಇದರ ಸಹಕಾರದೊಂದಿಗೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇಲ್ಲಿಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಾವು ನಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡ ಬೆಟ್ಟು ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಾಸುದೇವ ಕಕ್ಕೆನೇಜಿ ರವರು ನೆರವೇರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಊರಿನ ಜನರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಎಸ್.ಡಿ.ಎಮ್ ಆಸ್ಪತ್ರೆಯ ಮೇಲ್ವಿಚಾರಕರಾದ ರವೀಂದ್ರ ಗುಡಿಗಾರರವರು ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.

ತಾಲೂಕಿನ ಯೋಜನಾಧಿಕಾರಿ ಯಶೋಧರ ಯಾವುದೇ ವ್ಯಕ್ತಿಗೆ ಆರೋಗ್ಯದಲ್ಲಿ ಸಮಸ್ಯೆಯಾದಾಗ ನಾವು ನಿರ್ಲಕ್ಷ್ಯ ವಹಿಸದೆ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಗ್ರಾ.ಪಂ. ಅಧ್ಯಕ್ಷ ವಿನಯ ಚಂದ್ರ ಗೌಡ ರವರು ಕ್ಷೇತ್ರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಶಿಬಿರದ್ದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಮಾoಜ , ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ನೋಣಯ್ಯ ಗೌಡ ಬಂಗಾಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ. ಒಕ್ಕೂಟದ ಅಧ್ಯಕ್ಷ ಜಗದೀಶ್ ಕುಂಬಾರ ಮತ್ತು ಸುರೇಶ್, ಶೌರ್ಯ ವಿಪತ್ತು ಘಟಕ ಪ್ರತಿನಿಧಿ ಲೋಕೇಶ್ ಕುಂಬಾರು ಉಪಸ್ಥಿತರಿದ್ದರು. ಮಕ್ಕಳ ತಜ್ಞರಾದ ಡಾ| ಪ್ರತೀತ್ , ಮೂಳೆ ತಜ್ಞರಾದ ಡಾ| ರಜತ್, ಕಣ್ಣಿನ ತಜ್ಞರಾದ ಡಾ| ಶುಭಾಸ್ ಚಂದ್ರ, ಇ ಎನ್ ಟಿ ತಜ್ಞ ಡಾ| ರೋಹನ್ ದೀಕ್ಷಿತ್, ಪಿಜೀಷಿಯನ್ ಜನರಲ್ ಡಾ| ಪ್ರೌ ಸ್ಟಿಲ್ ಮತ್ತು ಡಾ| ಆದರ್ಶ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ತಪಾಸಣೆಯನ್ನು ನಡೆಸಿಕೊಟ್ಟರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ತ್ರಿವೇಣಿ ಸ್ವಾಗತಿಸಿ, ವಲಯ ಮೇಲ್ವಿಚಾರಕ ಜನಾರ್ದನ ಧನ್ಯವಾದವಿತ್ತರು. ಸೇವಾ ಪ್ರತಿನಿಧಿ ರಶ್ಮಿ ಸುರೇಖಾ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya
error: Content is protected !!