24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.


ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬAಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತçಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!