July 23, 2026
ರಾಜಕೀಯ

ಉಜಿರೆ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

ಉಜಿರೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 08 ರಂದು ಉಜಿರೆ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಶಾರದಾ ಮಂಟಪ ಸಭಾಭವನದಲ್ಲಿ ನಡೆಯಿತು.ಪಕ್ಷದ ಹಿರಿಯ ಕಾರ್ಯಕರ್ತರಾದ ರಘುನಾಥ್ ಶೆಣೈ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.

ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟನಾ ಭಾಷಣ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಾಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಪಕ್ಷದ ಪ್ರಮುಖರಾದ ನಂದಕುಮಾರ್, ಕೃಷ್ಣಮೂರ್ತಿ, ವೃಷಾoಖ್ ಖಾಡಿಲ್ಕರ್ ಬೈಠಕ್ ತೆಗೆದುಕೊಂಡರು. ದಿನಕರ್ ಕುಲಾಲ್ ರವರು ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಂಡಲ ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಅರಣೆಪಾದೆ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವoತ್ ಗೌಡ ಪುದುವೆಟ್ಟು, ಪ್ರಧಾನ ಕಾರ್ಯದರ್ಶಿ ನಿರಂಜನ್ , ಕೇಶವ ಭಟ್ ಅತ್ತಾಜೆ, ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ, ಭಾಸ್ಕರ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಶ್ರೀಮತಿ ಶಶಿಕಲಾ ಪಂಚಾಯತ್ ಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ಮಿಲ್ಕ್ ಸೊಸೈಟಿ ನಿರ್ದೇಶಕರುಗಳು, ಪಂಚಾಯತ್ ಸದಸ್ಯರು ಗಳು, ಬೂತ್ ಪದಾಧಿಕಾರಿಗಳು, ಪಕ್ಷದ ಅನ್ಯನ್ಯ ಜವಾಬ್ದಾರಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಉಜಿರೆ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಕಿರಣ್ ಕಾರಂತ್ ಸ್ವಾಗತಿಸಿ, ಬಿಜೆಪಿ ಗೀತೆ ಸಂಧ್ಯಾ ಹಾಗೂ ಸಂಘದ ಗೀತೆ ಜಯಲಕ್ಷ್ಮೀ ಯವರು ಹಾಡಿದರು,ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಜಯಂತ್ ಕಾರ್ಯಕ್ರಮ ನಿರೂಪಿಸಿ, ಉಜಿರೆ ಪಂಚಾಯತ್ ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲುರವರು ಧನ್ಯವಾದವಿತ್ತರು.

Related posts

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!