September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನದ ಜಾಗೃತಿ ಕಾರ್ಯಕ್ರಮ

ಉಜಿರೆ: ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ವ್ಯುತ್ಪತ್ತಿ ಸಂಘದ ವತಿಯಿಂದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿ ವರ್ಷ ಸೆ.10ರಂದು ನಡೆಸಲ್ಪಡುವ ಈ ಕಾರ್ಯಕ್ರಮದ ಉದ್ದೇಶ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವುದು ,ಜಾಗೃತಿ ಮೂಡಿಸುವುದು ಹಾಗೂ ಸಹಾನುಭೂತಿ ಬೆಳೆಸುವುದು ಆಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್‌ನ ಆಶ್ರಯದಲ್ಲಿ ವಿಶ್ವಾದ್ಯಂತ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಅಂತೆಯೇ ಕಾಲೇಜಿನ ವಿದ್ಯಾರ್ಥಿಗಳು ಈ ವಿಷಯದ ಕುರಿತಾದ ಮಾಹಿತಿಗಳನ್ನೊಳಗೊಂಡ ಭಿತ್ತಿಪತ್ರಗಳನ್ನು ರಚಿಸಿ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಜೀವನವು ಅಮೂಲ್ಯ ಹಾಗೂ ಕ್ಷುಲ್ಲಕ ಕಾರಣಗಳಿಗೆ ಜೀವನ ಅಂತ್ಯಗೊಳಿಸುವ ನಿರ್ಧಾರ ಸರಿಯಲ್ಲ . ಕಾಲೇಜಿನ ಆಪ್ತ ಸಮಾಲೋಚನಾ ವಿಭಾಗವನ್ನು ಸಂಪರ್ಕಿಸಿ ಸೂಕ್ತ ಮಾರ್ಗದರ್ಶನ ಪಡೆಯುವಂತೆ ಅರಿವು ಮೂಡಿಸುವ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರಾಸ್ತಾವಿಕ ಮಾಹಿತಿ ನೀಡಿದರು. ಮನೋವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ಯಾಮಿಲ ವಿದ್ಯಾರ್ಥಿಗಳಿಗೆ ಸಹಕರಿಸಿದರು. ಉಪನ್ಯಾಸಕರಾದ ದಿವ್ಯಾ ಕುಮಾರಿ ಹಾಗೂ ಡಾ. ಸಾಜಿದ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya
error: Content is protected !!