32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಆರಂಬೋಡಿ : ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಆರಂಬೋಡಿ ಇದರ ವಾರ್ಷಿಕ ಮಹಾಸಭೆಯು ಸೆ.09 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಮಹಾ ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಆಶಾ. ಎಸ್. ಶೆಟ್ಟಿ ವಹಿಸಿದ್ದರು. ಕಾರ್ಯದರ್ಶಿ ಧನವತಿ ಪ್ರಾರ್ಥಿಸಿ, ಸ್ವಾಗತಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಮ್.ಬಿ.ಕೆ ಸುಮತಿ 2ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮೃತಿ , ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ , ಫಾರ್ಮ್ ಮೆನೇಜರ್ ಬಂಗಾರಪ್ಪ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಬಗ್ಗೆ, ಅದರ ದ್ಯೇಯೋದ್ದೇಶದ ಬಗ್ಗೆ, ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಇತರ ಹಲವಾರು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಪೋಷಣ ಅಭಿಯಾನದ ಬಗ್ಗೆ ಸಿಸ್ಟರ್ ಕುಸುಮಾವತಿ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ಎಲ್.ಸಿ.ಆರ್.ಪಿ ಶಾರದಾ ನಿರೂಪಿಸಿ, ಪಶುಸಖಿ ಸುಭಾಷಿನಿ ಧನ್ಯವಾದವಿತ್ತರು.

Related posts

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya
error: Content is protected !!