25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.
ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.

ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು.
ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya
error: Content is protected !!