ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

ಉಜಿರೆ: ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಎಂ. ಭಾಸ್ಕರ ಚಕ್ರವರ್ತಿ ಹೇಳಿದರು.

ಅವರು ಸೆ.12 ರಂದು ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್‌ಸೆಟ್ ಸಂಸ್ಥೆಗಳ) ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರಾಯೋಗಿಕವಾಗಿ ಉಜಿರೆಯಲ್ಲಿ ಆರಂಭಿಸಿದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ ಮಾದರಿಯಾಗಿದ್ದು ಕೇಂದ್ರಸರ್ಕಾರವೂ ಇದಕ್ಕೆ ಮಾನ್ಯತೆ ನೀಡಿದ್ದು, ದೇಶದೆಲ್ಲೆಡೆ ಇಂದು ೬೭೦ ಸಂಸ್ಥೆಗಳು ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ ನೀಡುತ್ತಿದ್ದು ದೇಶದ ಆರ್ಥಿಕ ಪ್ರಗತಿಯಲ್ಲಿ ಇವುಗಳ ತ್ಯಾಗ, ಸೇವೆ ಮತ್ತು ಸಾಧನೆ ಅಮೂಲ್ಯವಾಗಿದೆ ಎಂದು ಶ್ಲಾಘಿಸಿ ಅಭಿನಂದಿಸಿದರು.


ಕೌಶಲಾಭಿವೃದ್ಧಿ ಇಂದು ಅಗತ್ಯವಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಗೃಹನಿರ್ಮಾಣ ಕಾರ್ಮಿಕರು ಹಾಗೂ ಇತರ ಕುಶಲಕರ್ಮಿಗಳ ಬೇಡಿಕೆ ಹೆಚ್ಚಾಗುತ್ತಿದ್ದು ಕೌಶಲಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.
ಎಲ್ಲಾ ನಿರ್ದೇಶಕರುಗಳು ಪ್ರತಿದಿನ ರುಡ್‌ಸೆಟ್ ಸಂಸ್ಥೆಗಳ ಸ್ವಚ್ಛತೆ ಮತ್ತು ನಿರ್ವಹಣೆ ಬಗ್ಯೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.


ರುಡ್‌ಸೆಟ್ ಸಂಸ್ಥೆಗಳ ರಾಷ್ಟ್ರೀಯ ನಿಯಂತ್ರಕ ಬೆಂಗಳೂರಿನ ಆರ್.ಆರ್. ಸಿಂಗ್ ಮಾತನಾಡಿ ತರಬೇತಿ ನೀಡುವಾಗ ನಿರುದ್ಯೋಗಿಗಳಲ್ಲಿ ನಾಯಕತ್ವ ಗುಣವನ್ನೂ ಬೆಳೆಸಬೇಕು ಎಂದು ಹೇಳಿದರು.
ರುಡ್‌ಸೆಟ್ ಸಂಸ್ಥೆಗಳ ಮಹಾನಿರ್ದೇಶಕ ರಾಜು ಎನ್. ಕೋರಿ ಮಾತನಾಡಿ ಗ್ರಾಮೀಣ ಪ್ರದೇಶದ ಬೇಡಿಕೆಗೆ ಅನುಗುಣವಾಗಿ ಹೊಸತನದ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು.
ಉನ್ನತ ಸಾಧನೆ ಮಾಡಿದ ರುಡ್‌ಸೆಟ್ ಸಂಸ್ಥೆಗಳನ್ನು ಗೌರವಿಸಲಾಯಿತು.


ಆರ್ಥಿಕ ಆದಾಯ: ರುಡ್‌ಸೆಟ್ ಸಂಸ್ಥೆ, ಒನ್‌ಗೋಲ್ (ಪ್ರಥಮ), ರುಡ್‌ಸೆಟ್ ಸಂಸ್ಥೆ, ಧಾರವಾಡ (ದ್ವಿತೀಯ).
ವಾರ್ಷಿಕ ಕಾರ್ಯಯೋಜನೆ: ರುಡ್‌ಸೆಟ್ ಸಂಸ್ಥೆ, ವಿಜಯಪುರ (ಪ್ರಥಮ), ರುಡ್‌ಸೆಟ್ ಸಂಸ್ಥೆ, ಹಾಜಿಪುರ (ದ್ವಿತೀಯ).
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಉತ್ತಮ ಸೇವೆ, ಸಾಧನೆಗೆ ಎಲ್ಲಾ ನೌಕರರನ್ನು ಅಭಿನಂದಿಸಿದರು.


ಸಂಸ್ಥೆಗಳ ಪ್ರಗತಿ, ಸಾಧನೆ ಗುರುತಿಸಿ ಹೊಸ ಯೋಜನೆಗಳನ್ನು ರೂಪಿಸುವುದೇ ವಾರ್ಷಿಕ ಸಮ್ಮೇಳನದ ಉದ್ದೇಶವಾಗಿದೆ ಎಂದರು.
ಬ್ಯೂಟಿ ಪಾರ್ಲರ್, ಹೊಲಿಗೆ ಮೊದಲಾದ ವೃತ್ತಿಗಳನ್ನು ಮನೆಯಲ್ಲೆ ಮಾಡಬಹುದು ಎಂದು ಅವರು ಸಲಹೆ ನೀಡಿದರು. ನಿರ್ದೇಶಕರುಗಳು ಮತ್ತು ಸಿಬ್ಬಂದಿ ಉತ್ತಮ ಗುಣಮಟ್ಟದ ತರಬೇತಿಗೆ ವೈಯಕ್ತಿಕ ಗಮನ ಹರಿಸಬೇಕೆಂದು ಹೇಳಿ ಎಲ್ಲರಿಗೂ ಶುಭ ಹಾರೈಸಿದರು.
ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿದರು. ಉಜಿರೆ ಸಂಸ್ಥೆಯ ನಿರ್ದೇಶಕ ಅಜೇಯ ಧನ್ಯವಾದವಿತ್ತರು.
ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!