25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟದಲ್ಲಿ ಭಜನೆಯ ತರಬೇತಿ ನೀಡಲಾಗುತ್ತದೆ. ಇದರೊಂದಿಗೆ ಮನೆ-ಮನದಲ್ಲಿ ಬದಲಾವಣೆ ತರುವ ಕೆಲಸ ನಿರಂತರವಾಗಿದೆ. ಊರುಗಳಲ್ಲಿ ನಗರ ಭಜನೆ ಎಂಬ ಹೊಸ ಕಲ್ಪನೆ ಉದಯವಾಗಲು ಭಜನ ಕಮ್ಮಟ ಪ್ರೇರಣೆಯಾಯಿತು. ಮನೆ-ಮನೆಗೆ ತೆರಳಿ ನಗರ ಭಜನೆಯನ್ನು ಅತ್ಯುತ್ತಮ ರೀತಿಯಲ್ಲಿ ಮಾಡಲು ಗ್ರಾಮದಲ್ಲಿರುವ ಭಜನಾ ಮಂಡಳಿಗಳಿಗೆ ಕಮ್ಮಟಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಭಜನೆಯಂತಹ ಆಧ್ಯಾತ್ಮಿಕ ಕಾರ್ಯಕ್ರಮದಿಂದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ೨೭ನೇ ವರ್ಷದ ಭಜನಾ ಕಮ್ಮಟ ಕಾರ್ಯಾಗಾರವು ಸೆ.೧೪ರಿಂದ ಸೆ.೨೧ರವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.


ಸೆ.೧೪ ರಂದು ೨೭ನೇ ವರ್ಷದ ಭಜನಾ ಕಮ್ಮಟದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ನೇರವೇರಿಸಲಿದ್ದಾರೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿರಲಿದ್ದಾರೆ. ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಪಾಧ್ಯಕ್ಷರಾದ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.


ಸೆ.೨೧ ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಕಾರ್ಕಳ ಶಾಸಕರಾದ ವಿ.ಸುನೀಲ್ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭಾಗವಹಿಸಲಿದ್ದಾರೆ.
ಭಜನಾ ಕಮ್ಮಟ-೨೦೨೫ ಇದರ ಕಾರ್ಯದರ್ಶಿ ಎ.ವಿ ಶೆಟ್ಟಿ, ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಬಸ್ರೂರು ಹಾಗೂ ಪದಾಧಿಕಾರಿಗಳು ಪೂರ್ವ ತಯಾರಿಕೆಯಲ್ಲಿ ತೊಡಗಿದ್ದಾರೆ.

ಸೆ.೨೧: ಭಜನೋತ್ಸವ : ಸೆ. ೨೧ ರಂದು ಬೆಳಿಗ್ಗೆ ಗಂಟೆ ೯.೩೦ಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಆಯ್ದ ಭಜನಾ ಮಂಡಳಿಗಳಿAದ ಆಗಮಿಸುವ ಸುಮಾರು ೪೦೦ ಭಜನಾ ತಂಡಗಳ ೬೦೦೦ ಭಜನಾ ಪಟುಗಳಿಂದ ಶೋಭಾಯಾತ್ರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನೆ ನಡೆಯಲಿದೆ.
ನಗರ ಸಂಕೀರ್ತನೆ : ಭಜನಾ ತರಬೇತಿ ಕಮ್ಮಟದ ಸಂದರ್ಭ ಶಿಬಿರಾರ್ಥಿಗಳಿಂದ ಪ್ರತಿದಿನ ಸಂಜೆ ಗಂಟೆ ೫:೩೦ರಿಂದ ನಗರ ಭಜನೆ ನಡೆಯಲಿದೆ.ರಾತ್ರಿ ೭.೩೦ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಧ್ಯಾಹ್ನ ೧೨ರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾರ್ಯಾಗಾರದಲ್ಲಿ ಹಲವಾರು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya
error: Content is protected !!