September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

ಎಕ್ಸಲೆಂಟ್ ಮೂಡುಬಿದಿರೆ ಚಾಂಪಿಯನ್ ಕ್ರೀಡೆಯಿಂದ ನಾವು ಕಲಿಯುವ ಪಾಠ ಜೀವನದುದ್ದಕ್ಕು ನಮ್ಮ ಕೈ”ಹಿಡಿಯುತ್ತದೆ. ಮನಸ್ಸನ್ನು ಸಮತೋಲನದಲ್ಲಿ ಇಡುವಲ್ಲಿ ಕ್ರೀಡೆಯ ಪಾತ್ರ ದೊಡ್ಡದು ಎಂದು ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಮೂಡುಬಿದಿರೆಯ ಸಹಯೋಗದೊಂದಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಅಂಡರ್ -೧೯ , ಮೂಡುಬಿದಿರೆ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ನುಡಿದರು.

ವೇದಿಕೆಯಲ್ಲಿ ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕರಾದ ಎಂ. ಹೆಗ್ಡೆ, ಎಕ್ಸಲೆಂಟ್ ಮೂಡುಬಿದಿರೆಯ ದೈಹಿಕ ಶಿಕ್ಷಣ ತರಬೇತುದಾರರಾದ ಎಸ್.ಎಸ್. ಪಾಟೀಲ್ ಉಪಸ್ಥಿತರಿದ್ದರು. ಬಾಲಕರ ಹಾಗೂ ಬಾಲಕಿಯರ “ಭಾಗದ ಟೇಬಲ್ ಟೆನಿಸ್‌ನಲ್ಲಿ ಹಾಗೂ ಬಾಲಕಿಯರ “ಭಾಗದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ “ವಿದ್ಯಾರ್ಥಿಗಳು ಜಯಗಳಿಸಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ತರಬೇತುದಾರ ಲೆಫ್ಟಿನೆಂಟ್ ಮಹೇಂದ್ರ ಕುಮಾರ್ ಜೈನ್ ನಿರೂಪಿಸಿ ಕನ್ನಡ ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ವಂದಿಸಿದರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!