37.9 C
ಪುತ್ತೂರು, ಬೆಳ್ತಂಗಡಿ
March 6, 2026
ರಾಜಕೀಯ

ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು ನೇಮಕ

ಬೆಳ್ತಂಗಡಿ: ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಅಬ್ದುಲ್ ರಹಿಮಾನ್ ಪಡ್ಪು ರವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಕೆ.ಪಿ ಸಿ.ಸಿ.ಕಾರ್ಯಾಧ್ಯಕ್ಷರಾದ ಜೆ.ಇ.ಚಂದ್ರಶೇಖರ್ ರವರ ಆದೇಶದಂತೆ,ರಾಜ್ಯ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಕೆ ಪುಟ್ಟಸ್ವಾಮಿಗೌಡ ನೇಮಕಗೊಳಿಸಿರುತ್ತಾರೆ.

ಮುಂದಿನ ದಿನಗಳಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಘಟಕದ ಬ್ಲಾಕ್ ಪದಾಧಿಕಾರಿಗಳನ್ನು, ಬೂತ್ ಮಟ್ಟದ ಸಮಿತಿಯನ್ನು ,ಘಟಕದ ಎಲ್ಲಾ ವಿಭಾಗದ ಸಮಿತಿಯನ್ನು ರಚಿಸಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಮತ್ತು ರಾಜ್ಯ ಸಮಾವೇಶ ನಡೆಸಲು ಅನುವಾಗುವಂತೆ ಕಾರ್ಯನಿರ್ವಹಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಹಾಗೂ ಪಕ್ಷದ ದ.ಕ. ಮತ್ತು ಉಡಪಿ ಜಿಲ್ಲೆಯ ಅಧ್ಯಕ್ಷರು,ಮಾಜಿ ಶಾಸಕರು,ಪರಾಜಿತ ಅಭ್ಯರ್ಥಿಗಳು,ಜಿಲ್ಲಾ ಮಟ್ಟ ಮತ್ತು ಬ್ಲಾಕ್ ಮಟ್ಟದ ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಹಾಗೂ ಕಾರ್ಮಿಕ ಘಟಕದ ಬೆಳವಣಿಗೆಗೆ ಶ್ರಮಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಅಬ್ದುಲ್ ರಹಿಮಾನ್ ಪಡ್ಪು ರವರು ಈ ಹಿಂದಿನಿಂದಲೂ ಜಿಲ್ಲಾ ಮತ್ತು ರಾಜ್ಯಮಟ್ಟದ ಪಕ್ಷದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.ಮತ್ತು ಮಡಂತ್ಯಾರು ಸೌಹಾರ್ಧ ಫ್ರೆಂಡ್ಸ್ ಇದರ ಸ್ಥಾಪಕ ಅಧ್ಯಕ್ಷರಾಗಿ,ಮಡಂತ್ಯಾರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ,ಮಡಂತ್ಯಾರು ಸಿ.ಎ. ಬ್ಯಾಂಕಿನ ಮಾಜಿ ನಿರ್ದೇಶಕರಾಗಿ ಪ್ರಸ್ತುತ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ .

Related posts

ಕಳಿಯ, ನ್ಯಾಯತರ್ಪು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.

Suddi Udaya
error: Content is protected !!