24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮುಂಡಾಜೆ: ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ. 16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ತಿಳಿಸಿದರು.

ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಸೆ.13 ರಂದು ಜರಗಿದ ಸಂಘದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,071 ಮಂದಿ ಸದಸ್ಯರನ್ನು ಹೊಂದಿದ್ದು 7.96 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. 77. 23 ಕೋಟಿ ರೂ. ಠೇವಣಿ, ಡಿಸಿಸಿ ಬ್ಯಾಂಕ್ ನ ಸಹಕಾರದೊಂದಿಗೆ 114 ಕೋಟಿ ರೂ.ಸಾಲ ನೀಡಿದ್ದು ವರ್ಷಾಂತ್ಯಕ್ಕೆ ಶೇ. 100 ಸಾಲ ವಸೂಲಾತಿಯಾಗಿರುತ್ತದೆ ಎಂದು ಹೇಳಿದರು.

ಸಂಘದ ಅಭಿವೃದ್ಧಿ ದೃಷ್ಟಿಯಿಂದ ರೈತ ಸದಸ್ಯರು ಹಲವಾರು ಚರ್ಚೆಗಳನ್ನು ಮಾಡಿ, ಸೂಕ್ತ ಸಲಹೆ ಸೂಚನೆ ನೀಡಿದರು.

ವೇದಿಕೆಯಲ್ಲಿ ನಿರ್ದೇಶಕರಾದ ವೆಂಕಟೇಶ್ವರ ಭಟ್, ಶಶಿಧರ ಕಲ್ಮಂಜ, ರಾಘವ ಕಲ್ಮಂಜ,ರವಿ ಪೂಜಾರಿ,ಚೆನ್ನಕೇಶವ ನಾಯ್ಕ, ಅಶ್ವಿನಿ ಎ.ಹೆಬ್ಬಾರ್,ಸುಮಾ ಎಂ. ಗೋಖಲೆ,ಮೋಹಿನಿ, ನಾರಾಯಣ ಫಡ್ಕೆ, ಬಾಬು ಗೌಡ ,ಅಜಯ್ ಹಾಗೂ ಸಿಇಒ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.

ಕಕ್ಕಿಂಜೆ ಶಾಖಾ ಪ್ರಬಂಧಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಹೆಬ್ಬಾರ್ ವಂದಿಸಿದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!