September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

ಬೆಳ್ತಂಗಡಿ: ದೇಶವು ಸದೃಢತೆಯಿಂದ ಅಭಿವೃದ್ಧಿಯ ಪಥದತ್ತ ಸಾಗಲು ಪ್ರತಿಯೊಬ್ಬ ನಾಗರಿಕನೂ ಸಂವಿಧಾನಾತ್ಮಕ ಕಾನೂನುಗಳನ್ನು ಪಾಲಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದಿಂದ ನಡೆದ ‘ಸಂಸತ್ತಿನ ಅಣಕು ಪ್ರದರ್ಶನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಜಗತ್ತಿಗೇ ಮಾದರಿಯಾದ ಬೃಹತ್ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಹೆಮ್ಮೆಯಿಂದ ಬದುಕುತ್ತಿದ್ದೇವೆ. ಇದಕ್ಕೆ ಕಾರಣ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಆಗಿನ ಹಿರಿಯ ಮುಖಂಡರು ಕಂಡ ಕನಸಾಗಿದೆ. ವಿದ್ಯಾರ್ಥಿಗಳು ಆಡಳಿತಾತ್ಮಕ ವ್ಯವಸ್ಥೆಗಳನ್ನು ತಿಳಿದುಕೊಳ್ಳಬೇಕು. ಮತದಾನ ಮಾಡುವುದು ನಮ್ಮ ಹಕ್ಕಾಗಿದೆ. ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ದೇಶಕ್ಕೆ ಉತ್ತಮ ನಾಯಕರನ್ನು ನೀಡಬಹುದು. ಇದರಿಂದ ದೇಶವು ಬಲಿಷ್ಠವಾಗಲು ಸಾಧ್ಯವಾಗುತ್ತದೆ ಎಂದರು.

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಆಡಳಿತಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಉಪಸಿತರಿದ್ದರು.

ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ಸ್ವಾಗತಿಸಿದರು. ಉಪನ್ಯಾಸಕ ದಿನೇಶ್ ಗೌಡ ಧನ್ಯವಾದವಿತ್ತರು.ಕು ಅರುಫಾ ಸುಹಾನ ಮತ್ತು ಕು ಸುಮಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!