23.3 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ನಾರಾವಿ: ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇದರ ಆಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ )ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸೆ.12ರಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾoಶುಪಾಲ ಶ್ರೀ ಸಂತೋಷ್ ಸಲ್ದಾನಾ ಎಲ್ಲರನ್ನು ಸ್ವಾಗತಿಸಿದರು. ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಂತ ಅಂತೋನಿ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ವo. ಸ್ವಾಮಿ ರೂಪೇಶ್ ರವಿನ್ ತಾವರೋ “ಕಬಡ್ಡಿ ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕ್ರೀಡೆ. ಕ್ರೀಡೆಯಿಂದ ಮಾತ್ರ ಒಗ್ಗಟ್ಟು ಮೂಡಿಸಲು ಸಾಧ್ಯ “ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಾರಾವಿ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀ ರಾಜವರ್ಮ ಜೈನ್. ತಾಲೂಕು ಕ್ರೀಡಾ ಸಂಯೋಜಕರಾದ ಶ್ರೀ ಸಂದೀಪ್ ಪಲ್ಲೋಡಿ,ನಾರಾವಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸಂಜಯ್ ಮೀರಾoದ, ಕಾರ್ಯದರ್ಶಿ ಶ್ರೇಮತಿ ಎವ್ಜಿನ್ ರೋಡ್ರಿಗಸ್, ನಾರಾವಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಡೈನಾ ರೋಡ್ರಿಗಸ್, ನಾರಾವಿ ಪ್ರೌಢ ಶಾಲೆ ನಾರಾವಿಯ ಮುಖ್ಯ ಅಧ್ಯಾಪಕರಾದ ಶ್ರೀ ಗೋಪಾಲಕೃಷ್ಣ ತುಳುಪುಳೆ, ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಅಧ್ಯಾಪಕಿ ಶ್ರೀಮತಿ ಸೋಫಿಯಾ ಫೆರ್ನಾಂಡಿಸ್, ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯ ಅಧ್ಯಾಪಕರಾದ ಶ್ರೀ ರಿಚರ್ಡ್ ಮೋರಸ್, ನಾರಾವಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಪ್ರದೀಪ್ ಬಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ 16ಬಾಲಕರ ಹಾಗೂ 5ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಬಾಲಕರ ಮತ್ತು ಬಾಲಕಿಯರ ಎರಡೂ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಸ್ಥಾನವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ, ದ್ವಿತೀಯ ಸ್ಥಾನವನ್ನು ಸರಕಾರಿ ಪದವಿಪೂರ್ವ ಕಾಲೇಜು ವೇಣೂರು ಪಡೆದುಕೊಂಡವು. ಉಪನ್ಯಾಸಕರಾದ ಶ್ರೀ ಅವಿಲ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya
error: Content is protected !!