September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ನಾಯಕರ ಸಭೆ

ಬೆಳ್ತಂಗಡಿ: ಬಿಜೆಪಿಯ ಕೋಮುವಾದ, ಭ್ರಷ್ಟಾಚಾರ ಹಾಗೂ ಕಾಂಗ್ರೆಸ್ ನ ಹಗಲು ಜಾತ್ಯತೀತ ರಾತ್ರಿ ಕೋಮುವಾದ ನಿಲುವು ಮತ್ತು ನ್ಯಾಯ ನಿರಾಕರಣೆಗಳಿಂದ ಬೇಸತ್ತು ನಮ್ಮ ಪಕ್ಷದತ್ತ ಒಲವು ತೋರಿಸಿ ತಂಡೋಪತಂಡವಾಗಿ ಯುವಕರು, ಹಿರಿಯರು, ಮಹಿಳೆಯರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವಾಗ ಪಕ್ಷದ ನಾಯಕರಾದ ನಮಗೆ ಜವಾಬ್ದಾರಿಗಳು ಕೂಡ ದುಪ್ಪಟ್ಟಾಗಿದೆ. ಒಂದು ಐತಿಹಾಸಿಕ ಬದಲಾವಣೆಗಾಗಿ ನಾವು ನಮ್ಮ ಪಕ್ಷದ ಕೆಲಸ ಕಾರ್ಯಗಳಿಗೆ ಮತ್ತಷ್ಟು ವೇಗವನ್ನು ಹೆಚ್ಚಿಸಬೇಕಾಗಿದೆ. ನಮ್ಮ ಅತ್ಯಮೂಲ್ಯ ಸಮಯವನ್ನು ಕೊಡುಗೆಯ ರೂಪದಲ್ಲಿ ಈ ಪಕ್ಷಕ್ಕಾಗಿ ನೀಡಬೇಕಾಗಿದೆ ಎಂದು “ಬದಲಾವಣೆಗಾಗಿ ಕೊಡುಗೆ” ಎಂಬ ಘೋಷ ವಾಕ್ಯದೊಂದಿಗೆ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಹಮ್ಮಿಕೊಂಡ ‘ಎಸ್‌ಡಿಪಿಐ ನಾಯಕರ ಸಭೆ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಪ್ರಾಸ್ತವಿಕ ಮಾತನಾಡಿದರು. ವೇದಿಕೆಯಲ್ಲಿ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ ಉಪಸ್ಥಿತರಿದ್ದರು.

ಕ್ಷೇತ್ರ ಸಮಿತಿ ಸದಸ್ಯರಾದ ಸಲೀಂ ಗುರುವಾಯನಕೆರೆ ಕಾರ್ಯಕ್ರಮವನ್ನು ನಿರೂಪಿಸಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಧನ್ಯವಾದಗೈದರು.

Related posts

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!