25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುನಂದ ರವರ ಅಧ್ಯಕ್ಷತೆಯಲ್ಲಿ ಸೆ.15 ರಂದು ನಾವೂರು ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ ಪ್ರಿಯಾ ಆಗ್ನೇಶ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ಮಮತಾ, ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಿಕಟ ಪೂರ್ವ ಅಧ್ಯಕ್ಷ ಗಣೇಶ್ ಗೌಡ ಸ್ವಾಗತಿಸಿದರು. ಪಿಡಿಒ ಪೂರ್ಣಿಮಾ ಜೆ. ಅನುಪಾಲನ ವರದಿ ವಾಚಿಸಿದರು. ಸಿಬ್ಬಂದಿ ವನಜಾ ಜಮಾ ಖರ್ಚು ವಿವರ ಮಂಡಿಸಿದರು.ಸಿಬಂದಿ ರಶ್ಮಿ ವಾರ್ಡ್ ಸಭೆ ವರದಿ ವಾಚಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya
error: Content is protected !!