23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯ ಸೆ. 14 ರಂದು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿ ಮಾತನಾಡಿ ಸಂಘವು ವರದಿ ವರ್ಷದಲ್ಲಿ ಒಟ್ಟು ರೂ. 341 ಕೋಟಿ ವ್ಯವಹಾರ ನಡೆಸಿ, ರೂ. 1.53 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 13 ರಷ್ಟು ಡಿವಿಡೆಂಟ್ ನೀಡುವುದಾಗಿ ತಿಳಿಸಿದರು.

ಈ ವೇಳೆ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅರಸಿನಮಕ್ಕಿ ಪ್ರೌಢ ಶಾಲೆ ಹಾಗೂ ನೇಲ್ಯಡ್ಕ ಪ್ರೌಢ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಗೌರವಿಸಲಾಯಿತು. ಹಾಗೂ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕ ಸೀತಾರಾಮ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜು ಕೆ., ನಿರ್ದೇಶಕರಾದ ಕೊರಗಪ್ಪ ಗೌಡ, ರತೀಶ್ ಬಿ, ಧರ್ಮರಾಜ್ ಎ., ಗಂಗಾವತಿ, ಬೇಬಿ, ನಾಗೇಶ್ ಜಿ., ಬೇಬಿ ಕಿರಣ್, ಕೃಷ್ಣಪ್ಪ ಗೌಡ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು.

ಸಂಘದ ನಿರ್ದೇಶಕ ವರದಶಂಕರ ದಾಮ್ಲೆ ಸ್ವಾಗತಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್ ವಾರ್ಷಿಕ ವರದಿ ವಾಚಿಸಿದರು. ಶಾಖಾಧಿಕಾರಿ ಶ್ರೀಮತಿ ಜಯಂತಿ ಡಿ. ಸನ್ಮಾನಿತರ ಪರಿಚಯವನ್ನು ಮಾಡಿದರು. ಉಪಕಾರ್ಯದರ್ಶಿ ಶ್ರೀಮತಿ ಹರಿಣಾಕ್ಷಿ ಡಿ. ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ರತೀಶ್ ಗೌಡ ಧನ್ಯವಾದವಿತ್ತರು. ಮೃತ ಪಟ್ಟ ಸಂಘದ ಸದಸ್ಯರಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬೆಳಿಗ್ಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಮಧ್ಯಾಹ್ನ ಯಕ್ಷಗಾನ ತಾಳಮದ್ದಳೆ ಶಲ್ಯ ಸಾರಥ್ಯ ನಡೆಯಿತು.

Related posts

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!