38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

ಧರ್ಮಸ್ಥಳ: ಪ್ರಾಥಮಿಕ ಶಿಕ್ಷಣದಿಂದ ಆರಂಭಗೊಂಡು ಸ್ನಾತಕೋತ್ತರ ಪದವಿ, ವೃತ್ತಿಪರ ಶಿಕ್ಷಣ ಸೇರಿದಂತೆ ಶಿಕ್ಷಣ ಐವತ್ತಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಮುನ್ನಡೆಸುತ್ತಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಮೌಲ್ಯಾಧಾರಿತ ಶಿಕ್ಷಣ ಒದಗಿಸುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶ್ರೀ ಧರ್ಮಸ್ಥಳ ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದಿಂದ ನಡೆಯುವ ವಿದ್ಯಾದಾನ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಡಾ. ಹೆಗ್ಗಡೆಯವರು ಐಟಿಐ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ವೈದ್ಯಕೀಯ, ಇಂಜಿನಿಯರಿಂಗ್ ಅಲ್ಲದೆ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಹೀಗೆ ಹೊಸ ಹೊಸ ಕೋರ್ಸ್ಗಳನ್ನು ಪರಿಚಯಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೊಸ-ಹೊಸ ಅವಕಾಶಗಳನ್ನು ಸೃಷ್ಟಿಸಿದರು.

ಉಜಿರೆಯಲ್ಲಿ 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಎಸ್.ಡಿ.ಎಂ. ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಮತ್ತು ಧಾರವಾಡದಲ್ಲಿ ಎಸ್.ಡಿ.ಎಂ ವಿಶ್ವವಿದ್ಯಾಲಯವಿದ್ದು, ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಹೀಗೆ ಹಲವು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯು ಪ್ರಸಿದ್ಧವಾಗಿದೆ.
ಭಜನಾ ತರಬೇತಿ ಕಮ್ಮಟವು ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದೆ. ತರಬೇತಿಯಲ್ಲಿ ಶಿಸ್ತು, ಮೌಲ್ಯ, ಸ್ವಚ್ಛತೆ, ವ್ಯವಹಾರ ಇತ್ಯಾದಿಗಳನ್ನು ಅರಿತುಕೊಂಡು ಮುನ್ನಡೆದಾಗ ಬದುಕಿನಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದರು.
ಉಪನ್ಯಾಸದಲ್ಲಿ ನಾಡಿನ ವಿವಿಧ ಭಜನಾ ಮಂಡಳಿಗಳಿಂದ ಆಗಮಿಸಿದ ನೂರಾರು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya
error: Content is protected !!