ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷೆ ಭಾವನೆಗಳಿಗೆ ಮಾಧ್ಯಮ. ಪ್ರಸ್ತುತ ಅನೇಕ ಭಾಷೆಗಳನ್ನು ಕಲಿಯುವ ಅವಕಾಶಗಳಿವೆ ಬಳಸಿಕೊಳ್ಳಿ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.ಕೆ.ಡಿ.ಆರ್.ಡಿ.ಪಿ) ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿ.ಇ.ಒ) ಅನಿಲ್ ಕುಮಾರ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿಯರಾದ ಆತ್ಮೀಯ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಹ್ಯಾಂಡ್‌ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya
error: Content is protected !!