September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

ಉಜಿರೆ : ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಡಾ. ಡಿ . ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯ ಒದಗಿಸುವ ಉದ್ದೇಶದಿಂದ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಜಿನೀಯರ್ಸ್ ಡೇ ಪ್ರಯುಕ್ತ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಿಂದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ವಹಿಸಿದ್ದರು . ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ದಿನೇಶ್ ಉಪಸ್ಥಿತರಿದ್ದರು.

ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ರೆನಿಟಾ ವಿಲ್ಮಾ ಫೆರ್ನಾಂಡೀಸ್ ಸ್ಕ್ರ್ಯಾಚ್ ಗೇಮ್ ಡೆವಲಪ್‌ಮೆಂಟ್ ಬಗ್ಗೆ ಸಂಕ್ಷಿಪ್ತ ಪರಿಚಯ ನೀಡಿದರು. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಶ್ರೇಯಸ್ ಆರ್. ರಾವ್ ಸ್ವಾಗತಿಸಿದರು. ವಿದ್ಯಾರ್ಥಿನಿ ಭವಿತಾ ಕಾರ್ಯಕ್ರಮ ನಿರೂಪಿಸಿದರು.



ಈ ಸ್ಪರ್ಧೆಯು ವಿದ್ಯಾರ್ಥಿಗಳಿಗೆ ಸ್ಕ್ರ್ಯಾಚ್ ಸಾಫ್ಟ್‌ವೇರ್ ಬಳಸಿ ತಮ್ಮ ಸೃಜನಶೀಲತೆ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಯಿತು.ಸುಮಾರು 60 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ಮಂಜೂಷ ವಂದಿಸಿದರು.

Related posts

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!