23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

ಬೆಳ್ತಂಗಡಿ ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ವತಿಯಿಂದ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆ.10 ರಿಂದ 12ರವರೆಗೆ ನಡೆಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ತರಬೇತಿಯ ಒಕ್ಕೂಟಗಳ ಕಾರ್ಯನಿರ್ವಹಣೆ ಮತ್ತು ಎಂಬಿಕೆಯವರ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಕಾರ್ಯಕ್ರಮದ ಉದ್ದೇಶದ ಕುರಿತಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಲಕ್ಷ್ಮಣ್ ತರಬೇತಿಯನ್ನು ನೀಡಿದರು.

ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಂದ 48 ಜನ ಮತ್ತು ಬಂಟ್ವಾಳ ತಾಲೂಕಿನ 6 ಜನ ಮುಖ್ಯ ಪುಸ್ತಕ ಬರಹಗಾರರು ತರಬೇತಿಯಲ್ಲಿ ಭಾಗವಹಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರುಗಳು, ಬಿಆರ್ ಪಿ -ಪಿಆರ್ ಐ ಉಪಸ್ಥಿತರಿದ್ದು ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
error: Content is protected !!