September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಯ ಪ್ರಯುಕ್ತ ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸೆ.15 ರಂದು ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಸಾಧಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆಹಾರ ಮತ್ತು ಪೋಷಣಾ ವಿಭಾಗದ ಮುಖ್ಯಸ್ಥ ಡಾ॥ ಅರ್ಚನಾ ಪ್ರಭಾತ್ ಸಾಧಕರಿಗೆ ಆಹಾರದ ಮಹತ್ವ ಮತ್ತು ಸಮಯ ಪಾಲನೆಯನ್ನು ನವ ಸಂಶೋಧನೆಗಳ ಉದಾಹರಣೆಯೊಂದಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಳಡಿತ್ತಾಯ ವಹಿಸಿ ಉಪವಾಸದ ಮಹತ್ವವನ್ನು ಪಸರಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳು ಹಾಗೂ ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ ಮತ್ತು ಶ್ರೀ ಧ. ಪ್ರ. ಚಿ. ಮಹಾವಿದ್ಯಾಲಯದ ಉಪಪ್ರಾಂಶುಪಾಲರು ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತ ಅವರು ಉಪಸ್ಥಿತರನ್ನು ಉದ್ದೇಶಿಸಿ ಮಾತನಾಡಿದರು.

ಪೌಷ್ಠಿಕಾಂಶ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಸ್ವಾಗತಿಸಿದರು ಹಾಗೂ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ॥ ಬಿಂದು ವಂದಿಸಿದರು. ಸಭೆಯಲ್ಲಿ ಡಾ|| ಶಶಿಕಾಂತ್ ಜೈನ್ ನಿರ್ದೇಶಕರು, ವೈದ್ಯಾಧಿಕಾರಿಗಳು, ಸ್ನಾತಕೋತ್ತರ ವೈದ್ಯರು, ಕಲಿಕಾ ವೈದ್ಯರು, 200 ಕ್ಕೂ ಹೆಚ್ಚು ಸಾಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೊರಸಂಪನ್ಮೂಲ ನೌಕರರಿಂದ ರಕ್ಷಿತ್ ಶಿವರಾಂ ರವರಿಗೆ ಮನವಿ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya
error: Content is protected !!