July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

ಉಜಿರೆ: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಉಜಿರೆ, ಪ್ರೇರಣ ಸಂಜೀವಿನಿ ಒಕ್ಕೂಟ ಉಜಿರೆ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್ ಚಿಕ್ಕಮಗಳೂರು ಇವರ ಸಹಭಾಗಿತ್ವದಲ್ಲಿ ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ವಿಷಯದಲ್ಲಿ ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗಿಡ ನೀಡುವ ಮೂಲಕ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಇವರು ಘನತ್ಯಾಜ್ಯ ನಿರ್ವಹಣೆಯನ್ನು ನಿರ್ವಹಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ವಿಷಯ ತಜ್ಞರಾದ ವಿಕ್ರಂ ಬೆಂಗಳೂರು ವಿನಾಯಕ ಹಾಗೂ ಅನ್ನಪೂರ್ಣೇಶ್ವರಿ ಫೌಂಡೇಶನ್ ನ ಅಧ್ಯಕ್ಷೆ ಸೌಮ್ಯ ಜೆ. ಜೆ ಮಾಹಿತಿ ನೀಡಿದರು.

ಪ್ರೇರಣ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನ್ನಪೂರ್ಣೇಶ್ವರಿ ಫೌಂಡೇಶನ್ ವಿನಾಯಕ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Related posts

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya
error: Content is protected !!