September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿಭಿನ್ನ ರೀತಿಯ ಉತ್ಪನ್ನಗಳನ್ನು ಪರಿಚಯಿಸಿ, ಅವುಗಳ ವೈಶಿಷ್ಟ್ಯಗಳು, ಉಪಯೋಗಗಳು ಹಾಗೂ ಮಾರ್ಕೆಟಿಂಗ್ ತಂತ್ರಗಳನ್ನು ಸೃಜನಾತ್ಮಕವಾಗಿ ಪ್ರದರ್ಶಿಸಿದರು. ಪ್ರತಿಯೊಂದು ತಂಡವು ತನ್ನ ಉತ್ಪನ್ನವನ್ನು ನವೀನ ರೀತಿಯಲ್ಲಿ ಪ್ರಸ್ತುತಪಡಿಸಿ, ಮಾರಾಟ ತಂತ್ರಗಳು, ಗ್ರಾಹಕರ ಆಕರ್ಷಣೆ ಮತ್ತು ಜಾಹೀರಾತಿನ ಮಹತ್ವವನ್ನು ಮನೋಜ್ಞವಾಗಿ ವಿವರಿಸಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಚಿಂತನೆ, ಸೃಜನಶೀಲತೆ ಹಾಗೂ ತಂಡದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಕಾರ್ಯಕ್ರಮದಲ್ಲಿ
ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದೀಕ್ಷಿತಾ, ಹಾಗೂ ದೀಕ್ಷಿತಾ. ಎ ಇವರು ತೀರ್ಪುಗಾರರಾಗಿ ಭಾಗವಹಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!