ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ-ಕೊಡಿಯಾಲಬೈಲು ಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ 14 ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿಗಳ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾನೆ. ಅಲ್ಲದೆ ಮಹಮದ್ ಆಶಿಂ, ಮಹಮದ್ ಸಾಬಿತ್, ಗಗನ್, ಪ್ರದ್ಯುಮ್ನ ಹಾಗೂ ಮಹಮದ್ ಬಿಲಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಬಿ ತರಬೇತಿ ನೀಡಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಸಹಕರಿಸಿ, ಪ್ರೋತ್ಸಾಹಿಸಿದರು.











