37.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಎಸ್.ಐ.ಟಿ ಗೆ ನೋಟೀಸ್ ನೀಡಿದೆ.

ಈ ಸಂಬಂಧ ಧರ್ಮಸ್ಥಳ ಗ್ರಾಮದ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಧರ್ಮಸ್ಥಳ ಸಾಮೂಹಿಕ ಅಂತ್ಯ ಸಂಸ್ಕಾರ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಒದಗಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ ಅವರಿಗೆ ಸೂಚಿಸಿ, ವಿಚಾರಣೆಯನ್ನು ಗುರುವಾರಕ್ಕೆ (ಸೆಪ್ಟೆಂಬರ್ 18) ಮುಂದೂಡಿತು.

ಅರ್ಜಿದಾರರ ಪರ ವಕೀಲ ದೀಪಕ್ ಖೋಸ್ಲಾ ಅವರು “ಅರ್ಜಿದಾರರು ಎಸ್‌ಐಟಿಗೆ ಆ 6 ಹಾಗೂ 29 ರಂದು ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಅನಾಮಧೇಯ ಶವಗಳನ್ನು ಅಕ್ರಮವಾಗಿ ದಫನ ಮಾಡಿರುವ ಬಗ್ಗೆ ಸ್ಥಳಗಳನ್ನು ಗುರುತಿಸಿದ್ದಾರೆ. ಈ ಸ್ಥಳಗಳಲ್ಲಿ ಕೂಡಲೇ ಭೂಮಿ ಅಗೆದು ಪರಿಶೀಲನೆ ನಡೆಸಲು ಎಸ್‌ಐಟಿಗೆ ನಿರ್ದೇಶನ ನೀಡಬೇಕು” ಗುರುತಿಸಿರುವ ಜಾಗಗಳಲ್ಲಿ ಮೃತದೇಹಗಳ ಅವಶೇಶಷಗಳು ಪ್ರಾಣಿಗಳು ಹಾಗೂ ಮನುಷ್ಯರಿಗೆ ಕಾಣುವಂತಿದ್ದು ಕೂಡಲೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಎಸ್‌ಐಟಿಗೆ ಆಗಸ್ಟ್ 29ರಂದು ನೀಡಿರುವ ಮನವಿಯನ್ನು ಪರಿಶೀಲಿಸಿ ಈ ಕೂಡಲೇ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು. ಅರ್ಜಿದಾರರು ತೋರಿಸುವ ಸ್ಥಳಗಳಲ್ಲಿ ಭೂಮಿ ಅಗೆಯಲು ಅನುವಾಗುವಂತೆ ಅರ್ಜಿದಾರರಿಗೆ ಜೊತೆಯಾಗಿ ನ್ಯಾಯಾಂಗ ರಿಜಿಸ್ಟ್ರಾರ್ ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಕೋರ್ಟ್ ಕಮಿಷನ‌ರ್ ನೇಮಕ ಮಾಡಬೇಕು. ಈ ಕುರಿತು ವಾಸ್ತವಿಕ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Related posts

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!