ಬೆಳ್ತಂಗಡಿ : ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ 10ನೇ ತರಗತಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಸೆ. 14ರಂದು ನಡೆಯಿತು.



ಕಳೆದ 35 ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ಟಿ ವಿ ಯನ್ನು ಕೊಡುಗೆಯಾಗಿ ನೀಡಲಾಯಿತು. ಸುಮಾರು 50 ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.











