ಬೆಳ್ತಂಗಡಿ: ಹೊಸಕೋಟೆ ತಾಲೂಕಿನ ಶಿಕ್ಷಣ ಸಂಯೋಜಕರಾಗಿ ಕಂಬಳೀಪುರ ಸರಕಾರಿ ಶಾಲೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಡ್ವರ್ಡ್ ಡಿಸೋಜ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಉಪ ನಿರ್ದೇಶಕರ ಕಚೇರಿಯಲ್ಲಿ ಸೆ.೧೬ರಂದು ನಡೆದ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಶಿಕ್ಷಣ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ. ಎಡ್ವರ್ಡ್ ಡಿ’ ಸೋಜ ಅವರು ಈ ಹಿಂದೆ ಬೆಳ್ತಂಗಡಿ ತಾಲೂಕಿನ ಕಟ್ಟದಬೈಲು ಶಾಲೆಯ ಮುಖ್ಯ ಶಿಕ್ಷಕರಿಗಾಗಿ ಸೇವೆ ಸಲ್ಲಿಸಿದ್ದು, ಬಳಿಕ ಹೊಸಕೋಟೆ ತಾಲೂಕಿಗೆ ವರ್ಗಾವಣೆಗೊಂಡಿದ್ದರು.











