23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆಯು ಸೆ.18 ರಂದು ಲೋಕಾರ್ಪಣೆಗೊಂಡಿತು.

ಕರ್ನಾಟಕ ರಾಜ್ಯಾದ್ಯಂತ 500 ಕೆಎಂಎಫ್ ನಂದಿನಿ ಮಾರಾಟ ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ವೆಂಕಟೇಶ್,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ವರ್ಚುವಲ್ ಆಗಿ ಉದ್ಘಾಟಿಸಲಾಯಿತು.

ಎಕ್ಸೆಲ್ ಆವರಣದ ನಂದಿನಿ ಮಳಿಗೆ ಲೋಕಾರ್ಪಣೆಯ ಸಂದರ್ಭದಲ್ಲಿ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಮಂಗಳೂರು ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ನಿಕಟಪೂರ್ವಾಧ್ಯಕ್ಷ ಸುಚರಿತ ಶೆಟ್ಟಿ, ನಿರ್ದೇಶಕರಾದ ಪ್ರಭಾಕರ್, ಮಮತಾ ಆರ್ ಶೆಟ್ಟಿ, ವ್ಯವಸ್ಥಾಪಕಾ ನಿರ್ದೇಶಕ ವಿವೇಕ್ ಡಿ, ಎಕ್ಸೆಲ್ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಡಾ‌.ಪ್ರಜ್ವಲ್, ಉಪ ಪ್ರಾಂಶುಪಾಲರಾದ ರೋಹಿತ್ ಎಂ, ಎಒ ಕೀರ್ತಿನಿಧಿ ಜೈನ್, ಒಕ್ಕೂಟದ ಅಧಿಕಾರಿಗಳು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!