ಗ್ರಾಮಾಂತರ ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜು

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

ಗುರುವಾಯನಕೆರೆ: ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದ್ದು ಇದು ಜವಾಬ್ದಾರಿಯೂ ಕೂಡ ಆಗಿದೆ ಎಂದು ಬೆಳ್ತಂಗಡಿ ಪೋಲಿಸ್‌ ನಿರೀಕ್ಷಕರಾದ ಬಿ.ಜಿ. ಸುಬ್ಬಾಪುರ ಮಠ ಹೇಳಿದರು.

ಅವರು ಗುರುವಾಯನಕೆರೆಯ ವಿದ್ವತ್‌ ಪದವಿ ಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್‌ ( ಬಂಟ್ವಾಳ ಉಪವಿಭಾಗ ) ಬೆಳ್ತಂಗಡಿ ಪೋಲಿಸ್‌ ಠಾಣೆಯ ವತಿಯಿಂದ ಜರುಗಿದ್ದ ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೆಳ್ತಂಗಡಿ ಪೋಲಿಸ್‌ ಠಾಣೆಯ ಉಪನಿರೀಕ್ಷಕರಾದ ಆನಂದ ಮಾತನಾಡಿ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾದವರನ್ನು ಗುರುತಿಸಿ ವ್ಯಸನಮುಕ್ತ ಕೇಂದ್ರಗಳ ಮೂಲಕ ಚಿಕಿತ್ಸೆ ನೀಡಬೇಕು. ಮಾದಕ ವಸ್ತುಗಳ ಸೇವನೆ ಮಾಡುವ ವ್ಯಕ್ತಿಯು ಸ್ವಇಚ್ಛೆಯಿಂದ ನಿರ್ಧಾರ ಕೈಗೊಂಡಾಗ ವ್ಯಸನ ಮುಕ್ತನಾಗಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ಈ ಬಗ್ಗೆ ಜಾಗೃತಿ ಮೂಡಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

ನಂತರ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗುವುದಿಲ್ಲ ಎಂದು ಪ್ರತಿಜ್ಞಾವಿಧಿಯನ್ನು ಕೈಗೊಂಡರು. ವೇದಿಕೆಯಲ್ಲಿ ವಿದ್ವತ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿಯಾದ ಪ್ರಜ್ವಲ್‌ ರೈ, ಕಾಲೇಜಿನ ಪ್ರಾಂಶುಪಾಲರಾದ ಹರೀಶ ಕೆ, ಆರ್‌ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ನೀಲಕಂಠ ಕಾರ್ಯಕ್ರಮ ನಿರೂಪಿಸಿದರು.

Related posts

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya
error: Content is protected !!