25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

ಉಜಿರೆ: ಭಜನೆಯಿಂದ ಸಮಾಜದ ಸಂಘಟನೆಯೊಂದಿಗೆ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಶುಭಾ ಮರವಂತೆ ಹೇಳಿದರು.


ಅವರು ಸೆ.18 ರಂದು ಧರ್ಮಸ್ಥಳದಲ್ಲಿ ಭಜನಾ ಕಮ್ಮಟದಲ್ಲಿ “ದೈನಂದಿನ ಜೀವನದಲ್ಲಿ ಭಜನೆಯ ಮಹತ್ವ”ದ ಬಗ್ಗೆ ಉಪನ್ಯಾಸ ನೀಡಿದರು.


“ಭಜನೆ” ಪದದಲ್ಲಿ “ಭ” ಅಂದರೆ ಭಗವಂತ, “ಜ” ಎಂದರೆ ಜನ್ಮಾಂತರಗಳ ಪಾಪನಾಶ ಹಾಗೂ “ನೆ” ಅಂದರೆ ಭಗವಂತನಲ್ಲಿ ನೆಲೆಯಾಗುವುದು ಎಂದು ಅರ್ಥ. ಶ್ರದ್ಧಾ-ಭಕ್ತಿಯಿಂದ ಭಗವಂತನಿಗೆ ಸಂಪೂರ್ಣ ಶರಣಾದರೆ ಮನಸ್ಸು ಮತ್ತು ದೇಹ ಹಗುರವಾಗುತ್ತದೆ. ಭಜನಾ ಕಮ್ಮಟದ ಮೂಲಕ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಅವರು ಹೇಳಿ ಅಭಿನಂದಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇದ್ದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಎನ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!