23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

ಬೆಳ್ತಂಗಡಿ: ಯ್ಯೂಟೂಬ್ ಚಾನಲ್ ನಲ್ಲಿ ಪ್ರಸಾರವಾದ “ಬೆಳ್ತಂಗಡಿ ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ” ಎಂಬ ಟೈಟಲ್ ನೊಂದಿಗೆ ಬಂದ ವರದಿಯ ಕಮೆಂಟ್ ಬಾಕ್ಸ್ ನಲ್ಲಿ “ಸನಾತನಿ ಸಿಂಹ” ಎಂಬ ಖಾತೆಯಿಂದ ‘ಒಂದು ಪೈಗಂಬರದು ಇನ್ನೊಂದು ಆಯೇಷಾ ದು’ ಎಂದು ರಿಪ್ಲಯ್ ಮಾಡಿದ್ದು ಹಾಗೂ ಅದೇ ಕಮೆಂಟ್ ಬಾಕ್ಸ್ ನಲ್ಲಿ Chetan Hoddetty ಎಂಬಾತ ‘ಒಂದು ಪೈಗಂಬರ್ ಇನ್ನೊಂದು ಆಯೇಷಾದು ಇರಬಹುದು’ ಎಂದು ಕಮೆಂಟ್ ಹಾಕಿ ಧಾರ್ಮಿಕ ನಿಂದನೆ, ಅಶಾಂತಿ ಸೃಷ್ಟಿ, ಧಾರ್ಮಿಕ ಭಾವನೆ ಕೆರಳಿಸಿ ಕೋಮು ಗಲಭೆ ಮಾಡುವ ಷಡ್ಯಂತ್ರ ಮತ್ತು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃತ್ಯವನ್ನು ನಡೆಸಿದ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ದೂರು ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ಸಲೀಂ ಸುನ್ನತ್ ಕೆರೆ, ಇಮ್ತಿಯಾಝ್ ಜಿ.ಕೆ, ಆರಿಫ್ ಕುಂಟಿನಿ ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!