22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

ಮಂಗಳೂರು: ಮಂಗಳೂರು ನಗರ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ಕರಾವಳಿ ಟೈಗರ್ಸ್ ನ ಇನ್ಸಾಗ್ರಾಮ್ ಪುಟದ ಪ್ರಚೋದನಕಾರಿ ಸಂದೇಶ ಪೋಸ್ಟ್ ಹಾಕಿದ ವಿರುದ್ಧ ಕಲಂ. 66(ಸಿ) ಐಟಿ ಕಾಯ್ದೆ ಹಾಗೂ ಕಲಂ. 56, 353(1), 192 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ಆರೋಪಿಯು ಕರಾವಳಿ ಟೈಗರ್ಸ್ ಹೆಸರಿನ ಇನ್ಸಾಗ್ರಾಮ್ ಪುಟದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ. ತಾಂತ್ರಿಕ ಪುರಾವೆಗಳ ಮೂಲಕ ಕಾರ್ಯಾಚರಣೆ ನಡೆಸಿ ಆರೋಪಿ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಿಲ್ಲೂರು ನಿವಾಸಿ ಶರೀಫ್ ಮಗ ಮೊಹಮ್ಮದ್ ಕೈಫ್(22) ಎಂಬಾತನನ್ನು ತಮಿಳುನಾಡಿನಲ್ಲಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ತಮಿಳುನಾಡು ರಾಜ್ಯಕ್ಕೆ ತೆರಳಿ ಸೆ.18 ರಂದು ಬಂಧಿಸಿ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕರಾವಳಿ-ಟೈಗರ್ಸ್ ವಿರುದ್ಧ ತನಿಖೆ ಮುಂದುವರಿದಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya
error: Content is protected !!