32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಸೆ. 17 ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು ,ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು ತರಕಾರಿಗಳನ್ನು ಉಪಯೋಗಿಸಿ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ಖಾದ್ಯಗಳನ್ನು ತಯಾರಿಸಿ ಇದರ ಮಹತ್ವ ಮತ್ತು ನಮ್ಮ ಆರೋಗ್ಯಕ್ಕೆ ಇದರಿಂದ ಸಿಗುವ ಉಪಯೋಗದ ಬಗ್ಗೆ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಕಾರ್ಯಕರ್ತೆಯಾದ ಶ್ರೀಮತಿ ಮಮತಾ ಇವರು ಸವಿವರವಾಗಿ ತಿಳಿಸಿದರು.

ಅದೇ ರೀತಿ ಪ್ರತಿದಿನ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡ್ರೇಡ್ ವಿಟಮಿನ್ ಇವೆಲ್ಲದರ ಪ್ರಮಾಣವನ್ನು ವಿವರಿಸಿದರು. ಇದರ ಜೊತೆಗೆ ಭಾರತ ಸರ್ಕಾರವು ಈ ದಿನ ಪ್ರಾರಂಭಿಸಿದ ಸ್ವಾಸ್ಥ್ಯ ನಾರಿ ಸಶಕ್ತ ಕುಟುಂಬ ಅಭಿಯಾನದ ಅಂಗವಾಗಿ ಬಂದ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರ ಶುಗರ್ ಲೆವೆಲ್ ಮತ್ತು ಬಿಪಿ ಪರೀಕ್ಷೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ,ತಾಯಂದಿರು, ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಮಮತಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಭವಾನಿ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಕ್ಷತಾ ಮತ್ತು ಸಹಾಯಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!