September 6, 2026
ಅಪರಾಧ ಸುದ್ದಿವರದಿ

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

ಬೆಳ್ತಂಗಡಿ: ಕೊಯ್ಯೂರಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣದ ಆರೋಪಿ ಉಮೇಶ್‌ ಗೌಡ ಅಪರಾಧಿಯೆಂದು ತೀರ್ಪು ನೀಡಿದ್ದು ಬೆಳ್ತಂಗಡಿ ನ್ಯಾಯಾಲಯವು ಮೂರು ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿದೆ.

2024 ಡಿಸೆಂಬರ್ 9ರಂದು ಕೊಯ್ಯೂರು ಗ್ರಾಮದ ಪಾಂಬೇಲು ಎಂಬಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಆರೋಪಿ ಉಮೇಶ್ ಗೌಡ ಚಿನ್ನದ ಸರವನ್ನು ಎಳೆದು ತುಂಡರಿಸಿ ಸರದೊಂದಿಗೆ ತಪ್ಪಿಸಿಕೊಂಡಿದ್ದ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆರೋಪಿಯನ್ನು ಅದೇ ದಿನ ಬಂಧಿಸಲಾಗಿತ್ತು.

ತನಿಖಾಧಿಕಾರಿಯಾದ ಬೆಳ್ತಂಗಡಿ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ ಮಠ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. 126(2),309(5), 309(6) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ಆರೋಪಗಳು ಬೆಳ್ತಂಗಡಿ ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಆರೋಪಿಗೆ ಸೆ.19 ರಂದು ಮೂರು ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ರೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ಸ್ಥಳ ಮಹಜರು ಪಿಎಸ್‌ಐ ಮುರುಳೀಧರ್ ನಾಯ್ಕ್, ತನಿಖಾ ಸಹಾಯಕರು ಎಎಸ್‌ಐ ಕುಲಾಜ್ಯೋತಿ ತಿಲಕ್, ಸಾಕ್ಷಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಬ್ಬಂದಿ ಸತೀಶ್.ಬಿ.ಆರ್ ಸಹಕರಿಸಿದ್ದಾರೆ.

Related posts

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya
error: Content is protected !!