July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

ಬೆಳ್ತಂಗಡಿ: ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.
ಸೆ.19 ರಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದಾರೆ.


ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾದ್ಯಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾಯತಿನಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು.

ಈ ಎಲ್ಲ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿತ್ತು ಮಧ್ಯಾಹ್ನದ ವರೆಗೆ ಇವರಿಬ್ಬರ ವಿಚಾರಣೆ ನಡೆಸಿದ್ದು 1.30 ರ ವೇಳೆಗೆ ವಿಚಾರಣೆ ಮುಗಿಸಿ ಹಿಂತಿರುಗಿದ್ದಾರೆ

Related posts

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya
error: Content is protected !!