September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯ ಹಾಗೂ ವಲಯದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಜನಾ ಮಂಡಳಿಗಳ ಪದಾಧಿಕಾರಿಗಳು, ದೇವಸ್ಥಾನ, ದೈವಸ್ಥಾನಗಳ ಮುಖ್ಯಸ್ಥರು, ಸಹಕಾರಿ ಬ್ಯಾಂಕ್ ನ ಅಧ್ಯಕ್ಷರ ಸಮ್ಮುಖದಲ್ಲಿ ಕೊರಿಂಜಾ ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಸಭಾ ಭವನದಲ್ಲಿ ಸೆ.28 ರಂದು ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.

ಅಧ್ಯಕ್ಷತೆಯನ್ನು ಸತ್ಯದರ್ಶನ ಕಾರ್ಯಕ್ರಮದ ವಲಯ ಸಂಚಾಲಕ ಪ್ರಫುಲ್ಲಚಂದ್ರ ಅಡ್ಯಾoತಾಯ ವಹಿಸಿದ್ದರು. ಪೂರ್ವಭಾವಿ ಸಭೆಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್. ಡಿ. ಎಂ ಶಾಲೆಯ ನಿವೃತ್ತ ಶಿಕ್ಷಕ ಸೋಮಶೇಖರ್ ಶೆಟ್ಟಿರವರು ಮಾತನಾಡುತ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯಾಗಿ 21 ನೇ ವಯಸ್ಸಿನಲ್ಲಿ ಪಟ್ಟಾಭಿಶಿಕ್ತಾರಾದ ವೀರೇಂದ್ರ ಹೆಗ್ಗಡೆಯವರು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಸಮಾಜದ ಕಟ್ಟಕಡೆಯ ವ್ಯಕ್ತಿಯು ಗೌರವ ಯುತವಾಗಿ ಬಾಳಿ ಬದುಕಬೇಕೆಂದು ಆಶಿಸಿದರು. ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದರು ಎಂದು ತಿಳಿಸಿದರು.

ವಲಯ ಸಂಚಾಲಕರಾದ ಪ್ರಫುಲ್ಲ ಚಂದ್ರರವರು ಮಾತನಾಡಿ ಧರ್ಮಾಧಿಕಾರಿಗಳು ಮಾಡಿದಂತಹ ಜನಪರ ಕಾರ್ಯಗಳನ್ನು ನೆನಪಿಸುತ್ತ ಸತ್ಯ ದರ್ಶನ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು ಮತ್ತು ಸಭೆಯಲ್ಲಿ ಗ್ರಾಮಮಟ್ಟದ ಸಂಚಾಲಕ ಸಹಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಕೊರಿಂಜಾ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ, ರೈತಬಂಧು ಆಹಾರೋದ್ಯಮದ ಮಾಲಕ ಶಿವಶಂಕರ ನಾಯಕ್, ಜನಜಾಗೃತಿ ಮಾಜಿ ವಲಯಧ್ಯಕ್ಷರಾದ ರಾಜಶ್ರೀ ಹೆಗ್ಡೆ, ಸಿ. ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪನೆಕ್ಕರ, ಕಲ್ಲೇರಿ ಸಿ ಎ ಬ್ಯಾಂಕ್ ಉಪಾಧ್ಯಕ್ಷರು ಸುನಿಲ್ ಗೌಡ ಅಣವು, ಕಣಿಯೂರು ಪಂಚಾಯತ್ ಅಧ್ಯಕ್ಷರಾದ ಸೀತಾರಾಮ ಮಡಿವಾಲ, ಮಾಜಿ ಮಂಡಲ ಅಧ್ಯಕ್ಷರಾದ ಸುದರ್ಶನ್ ಹೆಗ್ಡೆ, ಭಜನಾ ಮಂಡಳಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ವಲಯದ ಮೇಲ್ವಿಚಾರಕರಾದ ಕು ಶಿಲ್ಪಾ ಹಾಗೂ ವಲಯದ ಗಣ್ಯರು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಒಕ್ಕೂಟ ಅಧ್ಯಕ್ಷರು ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು, ಭಾಗವಹಿಸಿದರು. ಸೇವಾಪ್ರತಿನಿಧಿ ಸೀತಾರಾಮ ಆಳ್ವಾರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya
error: Content is protected !!