25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

ಧರ್ಮಸ್ಥಳ: ಜೀವನ ಶಿಕ್ಷಣವನ್ನು ಕಲಿಸುವ ಭಜನೆಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ. ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಭಜನಾ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಹೇಳಿದರು.


ಅವರು ಸೆ.20 ರಂದು ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟದಲ್ಲಿ “ಭಜನಾ ಸಂಸ್ಕೃತಿ ಬೆಳೆಸುವಲ್ಲಿ ಭಜನಾ ಮಂಡಳಿಗಳ ಪಾತ್ರ’’ ಎಂಬ ವಿಷಯದ ಬಗ್ಯೆ ಉಪನ್ಯಾಸ ನೀಡಿದರು.
ಪ್ರತಿಯೊಬ್ಬ ಭಜಕನೂ ಒಂದು ಆಲಯವಿದ್ದಂತೆ ಎಂದು ಹೇಳಿದ ಅವರು ಭಜನಾ ಕಮ್ಮಟದಲ್ಲಿ ಭಾಗವಹಿಸಿದ ಭಜಕರೆಲ್ಲರೂ ಭಜನಾ ಸಂಸ್ಕöÈತಿಯ ಮೂಲಕ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಪಸರಿಸುವ ರಾಯಬಾರಿಗಳಾಗಬೇಕು. ಮಕ್ಕಳಿಗೂ ಭಜನೆ ಕಲಿಸುವ ಮೂಲಕ ಅವರನ್ನು ಸಮಾಜದ ಸಭ್ಯ, ಸುಸಂಸ್ಕöÈತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ್ ಸಾಲ್ಯಾನ್ ಗೌರವ ಉಪಸ್ಥಿತಿ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಅಮ್ಮ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ತಿತರಿದ್ದರು. ಶ್ರೀಧಾಮ,ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಪರಮ ಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದಿವ್ಯಸಾನಿದ್ಯ ವಹಿಸಿದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಬಸ್ರೂರು, ಪದ್ಮರಾಜ್ ಜೈನ್, ಕೋಶಾಧಿಕಾರಿ, ಭಜನಾ ಕಮ್ಮಟ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ., ಅಳಿಯೂರು ಹಾಗೂ ರವೀಂದ್ರ ಇವರು ಕರ್ತವ್ಯ ನಿರ್ವಹಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಾಲೆಯ  ಅಧ್ಯಾಪಕರಾದ ಶ್ರೀಮತಿ ಶ್ರೀಜಾ ಯೋಗೀಶ್  ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
error: Content is protected !!