September 14, 2026
ತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು.

ಈ ಸಂಧರ್ಭ ಯುವ ವೇದಿಕೆಯ ಸಲಹೆಗಾರ ಮೋಹನ ಗೌಡ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕೋಶಾಧಿಕಾರಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿ ತೀಕ್ಷಿತ್ ದಿಡುಪೆ, ಉಪಾಧ್ಯಕ್ಷ ನಿತಿನ್ ಕಲ್ಮಂಜ, ಕಾನೂನು ಸಲಹೆಗಾರ ನವೀನ್ ನಿಡ್ಲೆ, ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಯಶವಂತ ಡೆಚ್ಚಾರು, ಭರತ್ ಪುದುವೆಟ್ಟು, ಸತೀಶ್ ಬೆಳಾಲು, ಅಕ್ಷಯ್ ಉಜಿರೆ, ಪ್ರಸಾದ್ ಚಾರ್ಮಾಡಿ, ಮಂಜುನಾಥ ಚಾರ್ಮಾಡಿ, ಸಚಿನ್ ಕನ್ಯಾಡಿ, ಶಿವಪ್ರಸಾದ್ ಕಲ್ಮಂಜ, ನಿತೇಶ್ ಬೆಳ್ತಂಗಡಿ, ಸೀತಾರಾಮ್ ಬೆಳಾಲು, ಧನಂಜಯ್ ಕುಮಾರ್ ಪೆರ್ಲ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾರಾಮಣ್ಣ ಗೌಡ, ಕಾರ್ಯದರ್ಶಿ ಲೀಲಾ ಬೆಳಾಲು, ದಯಾಮಣಿ ಕೊಯ್ಯೂರು, ಮೀನಾಕ್ಷಿ ಕುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya
error: Content is protected !!