25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯ ಕುಮಾರಿ ಮಾತನಾಡಿ “ಪ್ರಜಾಪ್ರಭುತ್ವವು ಪ್ರತಿಯೊಬ್ಬರಿಗೂ ಕೊಟ್ಟಿರುವ ಮತದಾನದ ಹಕ್ಕು ಬಹಳ ಅಮೂಲ್ಯವಾದುದು. ಆದರೆ ಚುನಾವಣೆಯಲ್ಲಿ ಭಾಗವಹಿಸದೆ ಇದ್ದರೆ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಲು ಆಗದೆ ನಮ್ಮ ಹಕ್ಕಿನ ಅಪಮೌಲ್ಯವಾಗುತ್ತದೆ. ಆದುದರಿಂದ ಮತದಾನದ ಹಕ್ಕನ್ನು ಸರಿಯಾಗಿ ಬಳಸಿಕೊಳ್ಳುವ ಗುರಿಯನ್ನು ಪ್ರತಿಯೊಬ್ಬರೂ ಹೊಂದಿರಬೇಕು” ಎಂದು ಹೇಳಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪಪ್ರಾಂಶುಪಾಲರಾದ ಡಾ.ರಾಜೇಶ್ ಬಿ “ಪ್ರಜಾಪ್ರಭುತ್ವ ವ್ಯವಸ್ಥೆಯ ಭಾರತದ ಆಡಳಿತ ಪ್ರತಿಯೊಬ್ಬ ಪ್ರಜೆಗಳಿಗೂ ಮಾನ್ಯತೆ ಕೊಡುತ್ತದೆ. ಯುವ ಜನಾಂಗಕ್ಕೆ ಪ್ರಜಾಪ್ರಭುತ್ವದ ಮಹತ್ವ ಕುರಿತು ಸರಿಯಾದ ಮಾಹಿತಿ ಸಿಕ್ಕಿದರೆ ಅದು ಇನ್ನಷ್ಟು ಸದೃಢಗೊಳ್ಳಲು ಸಾಧ್ಯ “ಎಂದು ಹೇಳಿದರು. ವೇದಿಕೆಯಲ್ಲಿ ಎನ್ಎಸ್ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಧನ್ಯ ಸ್ವಾಗತಿಸಿ ಮೌಲ್ಯ ವಂದಿಸಿದರು.

Related posts

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya
error: Content is protected !!