22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆಯಲ್ಲಿ ಸೆ.20ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಇತ್ತೀಚಿಗೆ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಪ್ರೇಮಾ ಡಿ. ಹಾಗೂ ನಿವೃತ್ತಿಗೊಳ್ಳಲಿರುವ ಆಶಾ ಕಾರ್ಯಕರ್ತೆ ಚಿನ್ನಮ್ಮ ರವರನ್ನು ಗೌರವಿಸಲಾಯಿತು. 2024-25ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಪಡಂಗಡಿ ಪ್ರೌಢ ಶಾಲೆಗೆ ಪ್ರಥಮ, ದ್ವಿತೀಯ ಸ್ಥಾನ ಬಂದ ಲಿಖಿತಾ ಹಾಗೂ ಸುಶಾಂತ್ ರವರನ್ನು ಸನ್ಮಾನಿಸಿ ಪ್ರೌಢ ಶಾಲಾ ಶಿಕ್ಷಕರನ್ನು ಗೌರವಿಸಲಾಯಿತು. ಶೇ.25 ರ ನಿಧಿಯ ಧನ ಸಹಾಯವನ್ನು ಫಲಾನುಭವಿಗಳಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚಾರ್ಡ್ ಗೋವಿಯಸ್, ಅಶೋಕ್ ಸಪಲ್ಯ, ಮೀನಾಕ್ಷಿ ಯೋಗೀಶ್ ಕುಮಾರ್ ಡಿ ಪಿ, ಕೃಷ್ಣಪ್ಪ, ಹರೀಶ್ ಕುಮಾರ್, ಆವಸಂತಿ ವಿನೋದ, ಶಕುಂತಲಾ, ಗಾಯತ್ರಿ, ವನಜಾಕ್ಷಿ, ಕವಿತಾ, ಸುಮತಿ ಪಿ., ಶುಭ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸಫನ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ ವರದಿ ಮಂಡಿಸಿ, ವಂದಿಸಿದರು. ಪಂ. ಸಿಬ್ಬಂದಿಗಳು ಪಡಂಗಡಿ, ಗರ್ಡಡಿ ವಾರ್ಡ್ ಸಭೆಯ ನಡವಳಿಯನ್ನು ಮಂಡಿಸಿದರು.

Related posts

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!