ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವವು ಸೆ. 22 ರಿಂದ ಅ.2ರವರೆಗೆ ವಿಜೃಂಭಣೆಯಿಂದ ಜರುಗಲಿದೆ.


ನವರಾತ್ರಿಯ ಎಲ್ಲಾ ದಿನಗಳಲ್ಲಿ ರಾತ್ರಿ ವಿವಿಧ ಆಹ್ವಾನಿತ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.


ಸೆ.22ರಂದು ಬೆಳಿಗ್ಗೆ ಗಣಹೋಮ, ಪಂಚಾಮೃತಾಭಿಷೇಕ, ತೋರಣ ಮುಹೂರ್ತ, ತೆನೆ ಮುಹೂರ್ತ ಜರುಗಲಿದೆ.
ಸೆ.27 ರಂದು ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಸಂಜೆ ಶ್ರೀ ದುರ್ಗಾನಮಸ್ಕಾರ ಪೂಜೆ ಜರಗುವುದು. ಅ.2ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಅಶ್ವತ್ಥ ಪೂಜೆ, ನಾಗತಂಬಿಲ, ಪರಿವಾರ ದೈವಗಳಿಗೆ ಪರ್ವ, ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಸಂಜೆ ರಂಗ ಪೂಜೆ ನೆರವೇರಲಿರುವುದು.

Related posts

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya
error: Content is protected !!