25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

ಬೆಳ್ತಂಗಡಿ: ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಸದಸ್ಯರ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಸೆ.22 ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಚಾಕೋ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಮಂಜು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಂಬತ್ತು ಮಂದಿ ಗರ್ಭಿಣಿಯರಾದ ಪ್ರಮೀಳಾ, ಫಾತಿಮಾತ್ ತ್ವಾಹೀರ, ಕವಿತಾ, ತ್ರಿಪುಣ್ಯ, ಅಶ್ವಿನಿ, ಅಂಬಿಕಾ, ಶ್ವೇತಾ, ಭವ್ಯಶ್ರೀ ಮತ್ತು ಶೋಭಾ ಅವರಿಗೆ
ಸೀಮಂತ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕಾರ್ಯಕರ್ತೆಯರು , ಸ್ತ್ರೀ ಶಕ್ತಿ ಸದಸ್ಯರು, ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಆಹಾರ ಪದಾರ್ಥಗಳಿಂದ, ಧಾನ್ಯಗಳಿಂದ ರಂಗೋಲಿ ಹಾಕಿ‌ ಅಲಂಕಾರಿಸಲಾಗಿತ್ತು. ಇತ್ತೀಚೆಗೆ ನಿಧನರಾದ ಅಂಗನವಾಡಿ ಕಾರ್ಯಕರ್ತೆ ಸಂಗೀತಾ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಇದರೊಂದಿಗೆ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕರಾದ ಜಯಾನಂದ ನಿರೂಪಿಸಿದರು.

Related posts

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!