September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಾಸ್ತನದಲ್ಲಿ ನವರಾತ್ರಿ ಉತ್ಸವ ಮತ್ತು ಚಂಡಿಕಾಯಾಗದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಆಸ್ರನ್ನ ಉದ್ಘಾಟಿಸಿದರು. ಕ್ಷೇತ್ರದ ಪರಂಪರೆಯಿಂದ ಬೆಳೆದು ಬಂದಿರುವ ಯಕ್ಷಗಾನ ಸೇವೆ ಶ್ರೀ ದುರ್ಗಾಪರಮೇಶ್ವರಿಯ ಅನುಗ್ರಹದಿಂದ ನಿರಂತರವಾಗಿ ಈ ಕ್ಷೇತ್ರದಲ್ಲಿ ಮುಂದುವರೆಯಲಿ ಎಂದು ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ಹರೀಶ್ ಕುಮಾರ್ ವಹಿಸಿದ್ದು ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತರು ಭಾಗವಹಿಸಿ ಶ್ರೀ ದುರ್ಗಾ ಮಾತೆಯ ಅನುಗ್ರಹ ಪಡೆಯುವಂತಾಗಲಿಯೆಂದರು.

ಮುಖ್ಯ ಅತಿಥಿಗಳಾಗಿದ್ದ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಕಲಾವಿದ ಗುಡ್ಡಪ್ಪ ಬಲ್ಯ ಶುಭ ಹಾರೈಸಿದರು. ಕಲಾವಿದ ಸಂಜೀವ ಪಾರೆಂಕಿ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರು, ಕಚೇರಿ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕರ್ನಾಟಕ ಯಕ್ಷ ಗಾನ ಅಕಾಡೆಮಿ ಸದಸ್ಯ ಮತ್ತು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ರಾಘವ. ಯಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.


.
ಬಳಿಕ ಶ್ರೀ ವಿನಾಯಕ ಯಕ್ಷಗಾನ ಮಂಡಳಿ ಬಲ್ಯ,ನೆಲ್ಯಾಡಿ ಇವರಿಂದ ಭಕ್ತ ಸುಧನ್ವ ತಾಳಮದ್ದಳೆ ಜರಗಿತು.ಹಿಮ್ಮೇಳದಲ್ಲಿ ಡಿ. ಕೆ ಆಚಾರ್ಯ ನೇರೆಂಕಿ, ಮುರಳಿಧರ ಕಲ್ಲೂರಾಯ, ಶ್ರೀ ಹರಿ ನಗ್ರಿ ಅರ್ಥಧಾರಿಗಳಾಗಿ ಗುಡ್ಡಪ್ಪ ಬಲ್ಯ, ಕಿರಣ್ ಪುತ್ತಿಲ, ಜಯರಾಮ ಗೌಡ ನಾಲ್ಗುತ್ತು, ದಿವಾಕರ ಆಚಾರ್ಯ ಹಳೆ ನೇರೆಂಕಿ ಭಾಗವಹಿಸಿದ್ದರು.

Related posts

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!