
ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಪರಕ್ಕಳ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಫ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕರಿಬ್ಬರಿಗೂ ಗಾಯಗಳಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದ ಸಂಧರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಮತ್ತು ಸ್ಥಳೀಯರು ಗಾಯಳುಗಳನ್ನು ಮೇಲಕ್ಕೆತ್ತಲು ಸಹಕರಿಸಿದರು.











