ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಮಾಲಾಡಿ : ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಸೆ. 22ರಂದು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿಯವರು ವಹಿಸಿದ್ದರು. ಪಂಚಾಯತ್ ಸದಸ್ಯೆ ಬಾಲ ವಿಕಾಸ ಸಮಿತಿ ಯ ಸದಸ್ಯೆ ಶ್ರೀಮತಿ ತುಳಸಿ ಉಮೇಶ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮಾಲಾಡಿ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಪ್ರಿಯಾ ರವರು ಪೌಷ್ಟಿಕ ಆಹಾರದ ಬಗ್ಗೆ ,ಗರ್ಭಿಣಿ ಬಾಣಂತಿಯರ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಸಮತೋಲನ ಆಹಾರ ಬಳಕೆ ,ಹಸಿರು ಸೊಪ್ಪು ತರಕಾರಿಗಳ ಬಗ್ಗೆ ,ಜೀವಸತ್ವಗಳ ಬಗ್ಗೆ ,ಕುಟುಂಬ ಯೋಜನೆಯ ಬಗ್ಗೆ,ಅವರಿಗೆ ಸಿಗುವಂತಹ ಸೌಲಭ್ಯಗಳಾದ ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಓರ್ವ ಗರ್ಭಿಣಿ ಮಹಿಳೆಗೆ ಸೀಮಂತನ ಶಾಸ್ತ್ರ ಮತ್ತು ಆರು ತಿಂಗಳ ಒಳಗಿನ ಇಬ್ಬರು ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸದಸ್ಯರು ,ಮಕ್ಕಳ ತಾಯಂದಿರು ,ಆಶಾ ಕಾರ್ಯಕರ್ತರು ತಯಾರಿಸಿ ತಂದಂತಹ ವಿವಿಧ ಬಗೆಯ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಎಲ್ಲರಿಗೂ ಹಂಚಲಾಯಿತು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಜಯಶ್ರೀ ,ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ,ಮಕ್ಕಳ ಹೆತ್ತವರು , ಅಂಗನವಾಡಿ ಸಹಾಯಕಿ ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರಭಾವತಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!